ಡಿ.ದೇವರಾಜ ಅರಸು

ಮೌನ ಕ್ರಾಂತಿಯ ಹರಿಕಾರ ಡಿ. ದೇವರಾಜ ಅರಸು.

 ಈ ರಾಷ್ಟ್ರ ಕಂಡ ಮಹಾನ್ ಮುತ್ಸದಿ ರಾಜಕಾರಣಿಗಳಲ್ಲಿ ಡಿ. ದೇವರಾಜ ಅರಸ್ ಅವರು ಅಗ್ರ ಗಣ್ಯರು. 1969 ರಿಂದ 1979 ದಶಕದಲ್ಲಿ “ಅರಸು ಯುಗ” ವೆಂದು ಹೇಳುವುದು ವಾಡಿಕೆಯಾಗಿದೆ. ಈ ರಾಜ್ಯದ ಮುಖ್ಯಮಂತ್ರಿಯಾಗಿ ಅತೀ ದೀರ್ಘಕಾಲ ಆಡಳಿತ ನಡೆಸಿ, ಸಮಾಜದ ಹಿಂದುಳಿದ ವರ್ಗದವರು, ದಲಿತರು ಮತ್ತು ಬಡಜನರನ್ನು ಜಾಗೃತಗೊಳಿಸಿ, ಅವರ ಕನಸು ಮನಸಿನಲ್ಲೂ ನೆನಸಲಾಗದಿದ್ದ ಅಧಿಕಾರದ ಅರಮನೆಗೆ ಕರೆದುಕೊಂಡು ಹೋದ ಮುತ್ಸದ್ದಿ. ಹೀಗಾಗಿ ಅವರು ಈ ರಾಜ್ಯದ, ಈ ದೇಶದ ಹಿಂದುಳಿದ ವರ್ಗಗಳ, ದಲಿತರ, ಬಡವರ ಮನಸ್ಸಿನಲ್ಲಿ ಎಂದೆಂದಿಗೂ ಚಿರಸ್ಥಾಯಿಯಾಗಿರುತ್ತಾರೆ. ಅಸಾಧ್ಯವಾದ ಸಾಧನೆಗಳನ್ನು ಮೌನವಾಗಿ ಮಾಡಿ ತೋರಿಸಿದ ಅವರನ್ನು “ ಮೌನಕ್ರಾಂತಿಯ ಹರಿಕಾರ” ಎಂದು ಹೇಳುತ್ತಾರೆ.
ಬಡವರ ಬದುಕಿನಲ್ಲಿ ಹೊಸ ಭರವಸೆ ತಂದುಕೊಟ್ಟ ಡಿ. ದೇವರಾಜ ಅರಸು ಕರ್ನಾಟಕದಲ್ಲಿ ಆರ್ಥಿಕ, ಸಾಮಾಜಿಕ ಆಂದೋಲನದ ಮೂಲಕ ಹಲವಾರು ಹಲವಾರು ಜನಹಿತ ಯೋಜನೆಗಳನ್ನು ಅನುಷ್ಠಾನಗೊಳಿಸುವುದರಲ್ಲಿ ಯಶಸ್ಸು ಸಾಧಿಸಿದವರು. ಚಿಕ್ಕಂದಿನಿಂದಲೂ ಹೊಸದನ್ನು ಕಟ್ಟುವ ಧೋರಣೆ ಹೊಂದಿದ್ದ ದೇವರಾಜ ಅರಸರು ತಮ್ಮ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಎಂಟು ವರ್ಷಗಳ ಕಾಲ ಕರ್ನಾಟಕದ ಮುಂಖ್ಯಮಂತ್ರಿಯಾಗಿ ಅಧಿಕಾರ ನಡೆಸಿ ನವ ಸಮಾಜದ ನಿರ್ಮಾಣಕ್ಕಾಗಿ ಭದ್ರ ಬುನಾದಿಯನ್ನು ಹಾಕಿ ಕೊಟ್ಟು ಆಡಿದ್ದನ್ನು ಮಾಡಿ ತೋರಿಸಿದವರು.
ದೇವರಾಜ ಅರಸು ಅವರು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಲ್ಲಹಳ್ಳಿಯಲ್ಲಿ 20-08-1915ರಂದು ಜನಿಸಿದರು. ತಂದೆ ದೇವರಾಜು ಅರಸು ತಾಯಿ ದೇವಿರಮ್ಮಣಿ. ಇವರ ಮನೆತನ ಕ್ಷತ್ರಿಯ ವಂಶಕ್ಕೆ ಸೇರಿದ್ದಾದರೂ ಬದುಕಿಗಾಗಿ ಬೇಸಾಯವನ್ನು ಆಯ್ದುಕೊಂಡಿತ್ತು. ಒಂದೆಡೆ ಕೃಷಿ ಮಾಡುತ್ತಲೇ ಓದಿನಲ್ಲೂ ಮುಂದೆ ಬಂದ ದೇವರಾಜ ಅರಸು ಮೈಸೂರಿನಲ್ಲಿ ಇಂಟರ್‍ಮೀಡಿಯಟ್ ಓದಿ ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎಸ್.ಸಿ ಪದವಿ ಪಡೆದರು. ಪದವಿ ನಂತರ ಹುಟ್ಟೂರು ಕಲ್ಲಹಳ್ಳಿಗೆ ಬೇಸಾಯ ಮಾಡಲು ಹಿಂದಿರುಗಿದರು. ಗ್ರಾಮದ ನ್ಯಾಯ ಪಂಚಾಯ್ತಿಗಳಲ್ಲಿ ಪಾಲ್ಗೊಳ್ಳುತ್ತಿದ್ದ ಅರಸರನ್ನು ರಾಜಕೀಯ ಅರಸಿ ಬಂತು. ಹೀಗಾಗಿ ಅವರು ಸ್ವಾತಂತ್ರ್ಯ ಪೂರ್ವದಲ್ಲಿಯೇ ಮೈಸೂರು ಸಂಸ್ಥಾನದ ಪ್ರಜಾಪ್ರತಿನಿಧಿ ಸಭೆಗೆ ಚುನಾಯಿತರಾದರು (1941). ಮೈಸೂರು ಅರಸರ ಸಂಬಂಧಿಗಳಾಗಿದ್ದರೂ ಸ್ವಾತಂತ್ರ್ಯ ಹೋರಾಟದಲ್ಲಿ (1942) ಸಕ್ರಿಯರಾಗಿದ್ದ ಅವರು ಚಲೇಜಾವ್ ಚಳುವಳಿಯಲ್ಲಿ ಭಾಗವಹಿಸಿ, ಕಾರಾಗೃಹವಾಸವನ್ನೂ ಅನುಭವಿಸಿದರು.

ಮಾನವತಾ ವಾದಿ :

ಅರಸು ಮಹಾ ಮಾನವತಾ ವಾದಿ, ಸಂಕಷ್ಟದಲ್ಲಿರುವವರನ್ನು ಕಂಡರೆ ಮರುಗುವ ಹೆಂಗರುಳು.  ಸಮಾಜದ ಕಟ್ಟಕಡೆಯ ವ್ಯಕ್ತಿಯ ಬಗ್ಗೆ ನಿಸ್ಸಹಾಯಕರ ಬಗ್ಗೆ ಅನುಕಂಪ, ಬದುಕಿನ ಸಂಧ್ಯಾಕಾಲದಲ್ಲಿ ಅನಾದರಣೆಗೆ ತುತ್ತಾಗುವ ವೃದ್ದರಿಗೆ ನೆಮ್ಮದಿ ನೀಡಲು 40 ರೂ. ಗಳ ಮಾಸಾಶನ ನೀಡಿ “ವೃದ್ಧಾಪ್ಯ” ವೇತನ ಜಾರಿಗೆ ತಂದರು. ಅಂಗವಿಕಲರು ಮತ್ತು ಅನಾಥರಿಗೆ ಆರ್ಥಿಕ ನೆರವು ನೀಡಿದರು. ಅಕ್ಷರ ಕಲಿತು ಪದವಿ ಪಡೆದ ಲಕ್ಷಾಂತರ ನಿರುದ್ಯೋಗಿ ಪದವೀಧರರ ಬಾಳಿನ ನಿರಾಸೆಯನ್ನು ದೂಡಲು “ಸ್ಟೈಫೆಂಡರಿ” ಯೋಜನೆ ಜಾರಿಗೆ ತಂದರು. ಗ್ರಾಮಾಂತರ ಮಕ್ಕಳ ಆರೋಗ್ಯ ರಕ್ಷಣೆಗೆ “ಪೌಷ್ಟಿಕ ಆಹಾರ” ಯೋಜನೆ, ದುರ್ಬಲ ಮತ್ತು ಹಿಂದುಳಿದ ವರ್ಗಗಳಿಗೆ “ಉಚಿತ ನಿವೇಶನ, ಮತ್ತು ಕಡಿಮೆ ವೆಚ್ಚದ ಮನೆ ನಿರ್ಮಾಣ” ಯೋಜನೆ, “ಭಾಗ್ಯಜ್ಯೋತಿ” ಯೋಜನೆ ಮೂಲಕ ದುರ್ಬಲರ ಮನೆಗಳಿಗೆ ದೀಪ ಬೆಳಗಿಸಿದರು. ಬಡವರ ನೆರವಿಗಾಗಿ ಸಹಕಾರ ಸಂಘಗಳನ್ನು ಸ್ಥಾಪಿಸಿದರು.

ಸಾಧನೆಗಳು :

1941 ರಲ್ಲಿ ಮೈಸೂರು ಸಂಸ್ಥಾನದ ಪ್ರಜಾಪ್ರತಿನಿಧಿ ಸಭೆಗೆ ಆಯ್ಕೆ. 1952 ರಲ್ಲಿ ಹುಣಸೂರು ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ. 1962 ರಲ್ಲಿ ಎಸ್. ನಿಜಲಿಂಗಪ್ಪನವರ ಮಂತ್ರಿಮಂಡಳದಲ್ಲಿ ಸಚಿವ ಸ್ಥಾನ. 1967ರ ಮಂತ್ರಿಮಂಡಳದಲ್ಲಿ ಸಚಿವ ಸ್ಥಾನ. ಪ್ರವಾಸ್ಯೋದ್ಯಮ, ಕಾರ್ಮಿಕ, ಸಾರಿಗೆ, ಪ್ರವಾಸೋದ್ಯಮ, ಪಶುಸಂಗೋಪನೆ, ವಾರ್ತಾ ಮತ್ತು ಪ್ರಚಾರ, ರೇಷ್ಮೆ, ಮೀನುಗಾರಿಕೆ ಖಾತೆಗಳನ್ನು ನಿರ್ವಸಿದರು. 20-03-1972 ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ. 20-02-1978 ರಲ್ಲಿ 2ನೇ ಬಾರಿ ಮುಖ್ಯಮಂತ್ರಿ.

ಮೌನಕ್ರಾಂತಿಯ ಹರಿಕಾರ :

 ನಮ್ಮ ನಾಡಿನ ಸಾಮಾಜಿಕ, ಶಿಕ್ಷಣ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಪರಿವರ್ತನೆಯ ಬಯಕೆಯನ್ನು ಪ್ರಜ್ಞಾಪೂರ್ವಕವಾಗಿ ಸೃಷ್ಟಿಸಿದವರು ಡಿ. ದೇವರಾಜ ಅರಸು ಅವರು. ಅವರು ಕನ್ನಡನಾಡಿನ ಜನಜೀವನದ ಮೇಲೆ ಬೀರಿದ ಮೇರು ಪ್ರಭಾವ ನಿರಂತರ ಸ್ಮರಣಯೋಗ್ಯ. ಎಂಟು ವರ್ಷಗಳ ಸುದೀರ್ಘಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಅರಸು ಇಟ್ಟ ದಿಟ್ಟ ಹೆಜ್ಜೆಗಳು ಭವಿಷ್ಯದ ಜನಾಂಗವನ್ನೇ ಬದಲಾಯಿಸಲು ನಾಂದಿಯಾದವು. ದುರ್ಬಲ ವರ್ಗದವರಲ್ಲಿ ಸ್ವಾಭಿಮಾನದ ಕಲ್ಪನೆ ಹುಟ್ಟಿಸಿ ಅವರಿಗೆ ಆರ್ಥಿಕ ಸ್ವಾವಲಂಬನೆ ಒದಗಿಸಿದ ಅರಸು ಅವರು ಯುಗಪುರುಷ. ಈ ನಾಡಿನ ಮಹಾನ್ ಚೇತನಗಳಲ್ಲಿ ಅರಸರ ವ್ಯಕ್ತಿತ್ವ ವಿಶಿಷ್ಟವಾದವು. ಅವರಲ್ಲಿ ರೈತನ ಆತ್ಮಾಭಿಮಾನವಿತ್ತು, ಶತ್ರುವನ್ನು ಪ್ರೀತಿಸುವ ಮಾನವ ಪ್ರೇಮವಿತ್ತು, ಎಡತಾಕ್ಕಿದ್ದನ್ನು ಎದುರಿಸಿ ಮುಂಬರುವ ಗುಣವಿತ್ತು. ಅವರು ದುಡಿದು ತಿಂದವರು, ಕೊಟ್ಟು ಬಾಳಿದವರು, ಸಾಧಿಸಿ ಶ್ರೇಯಸ್ಸು ಗಳಿಸಿದವರು, ದನಿಯಿಲ್ಲದವರ ಬದುಕಿಗೆ ಬಾಯಾದವರು. ಸಮಾಜವನ್ನು ಏಕಾಂಗಿಯಾಗಿಯೇ ಎದುರಿಸಿ ಪರಿವರ್ತನೆಯ ಹರಿಕಾರರಾಗಿ ಯಶಸ್ಸು ಕಂಡವರು. ಅವರ ಬದುಕು ನಿರಂತರ ಹೋರಾಟ ಗಾಥೆ.

 ಗೇಣಿದಾರರ ವಿಮೋಚನೆ :

 ದೇವರಾಜ ಅರಸು ಸ್ವಾಭಿಮಾನಿ, ಆತ್ಮಗೌರವದಲ್ಲಿ ಅವರಿಗೆ ಅಚಲ ನಂಬಿಕೆ. ಇನ್ನೊಬ್ಬರ ಹಂಗಿನಲ್ಲಿ ಬಾಳದ ಆತ್ಮಾಭಿಮಾನಿ. ಈ ಗುಣ ಅವರು ಓದುತ್ತಿರುವಾಗಲೇ ಸುವ್ಯಕ್ತಗೊಂಡಿತ್ತು. ಮೈಸೂರಿನ ಅರಸು “ಬೋರ್ಡಿಂಗ್ ಶಾಲೆ” ಯಲ್ಲಿ ಓದುವುದನ್ನು ನಿರಾಕರಿಸಿ, ಸ್ವತಂತ್ರವಾಗಿಯೇ ಓದು ಮುಂದುವರಿಸಿದ ವ್ಯಕ್ತಿ. ಗೇಣಿಯನ್ನು ನಂಬಿ ಬದುಕುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು “ಭೂ ಸುಧಾರಣೆ”ಯನ್ನು ಅತ್ಯದ್ಭುತ ರೀತಿಯಲ್ಲಿ ಜಾರಿಗೆ ತಂದರು. ಅದುವರೆವಿಗೂ “ಉಳುವವನೇ ಹೊಲದೊಡೆಯ” ಎಂಬ ನೀತಿ ಬರೀ ಘೋಷಣೆಯಾಗಿತ್ತು. ಭೂ ಸುಧಾರಣೆಯನ್ನು ತ್ವರಿತವಾಗಿ ಜಾರಿಗೆ ತರಲು ನಿಶ್ಚಿತ ಅವಧಿಯಲ್ಲಿ ಉಳುವವನೇ ಹೊಲದೊಡೆಯನಾಗಲು ಪ್ರಗತಿಪರ ಶಾಸನವನ್ನು ತಂದರು. ನ್ಯಾಯಾಲಯ ಕಛೇರಿ ಕಾನೂನಿನ ಲೋಪದೋಷಗಳ ಸುಳಿಯಲ್ಲಿ ಸಿಕ್ಕ ಮುಗ್ದ ಹಳ್ಳಿಗರಿಗೆ ಜಯ ಅಸಾಧ್ಯ ಎಂದರಿತ ಅರಸು ಅವರು ಭೂ ಸುಧಾರಣಾ ಮಂಡಳಿಯನ್ನು ರಚಿಸಿದರು. ಭೂ ಸುಧಾರಣಾ ಮಂಡಳಿಗಳಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳಿರುವಂತೆ ಹಾಗೂ ಪ್ರತಿನಿಧಿಗಳು ನೀಡಿದ ತೀರ್ಪನ್ನು ನ್ಯಾಯಾಲಯದಲ್ಲಿ ಪ್ರಶ್ನಿಸದಿರುವ ಹಾಗೆ ಮಾಡಿದರು. ಶತಮಾನಗಳಿಂದ ಅಜ್ಞಾನ, ಗುಲಾಮಗಿರಿಯಲ್ಲಿ ಸೊರಗಿದ್ದ ಗೇಣಿದಾರರಿಗೆ ವಿಮೋಚನೆಯ ಮಾರ್ಗ ತೋರಿದರು.

ಸಾಮಾಜಿಕ ಪರಿವರ್ತನೆ :

ಅಸಮಾನತೆಯನ್ನು ತೊಡೆದು ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಬೆಲೆ ನೀಡಿದ ಅರಸರು ಜೀತ ವಿಮುಕ್ತಿಯನ್ನು ಜಾರಿಗೆ ತಂದರು. ಶೋಷಿತ ಜನಾಂಗದ ಬೆನ್ನೆಲುಬಿಗೆ ಕಸುಬನ್ನು ತುಂಬಿದರು.  ಮಲಹೊರುವಂತ ಅಮನುಷ ಪದ್ದತಿ ಇವರ ಆಡಳಿತ ಕಾಲದಲ್ಲಿ ಕೊನೆಗೊಂಡಿತು. ಕೃಷಿ ಕಾರ್ಮಿಕರಿಗೆ ಕನಿಷ್ಠ ಕೂಲಿಯನ್ನು ನಿಗದಿಪಡಿಸಿ ಆರ್ಥಿಕ ಬೆಂಬಲ ನೀಡಿದರು. ಸಾಲದ ಸಂಕೋಲೆಯಿಂದ ಪರಿತಪ್ಪಿಸುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ಋಣಪರಿಹಾರ ತಂದು ಅವರ ಕಣ್ಣೀರು ಒರೆಸಿದರು. ಅರಸರು ಜಾರಿಗೆ ತಂದ ಭೂ ಸುಧಾರಣೆ, ಜೀತವಿಮುಕ್ತಿ ಮತ್ತು ಋಣಪರಿಹಾರ ಕಾರ್ಯಕ್ರಮಗಳು ವ್ಯವಸ್ಥೆಯ ವಿರುದ್ಧ ಸಾರಿದ ಸಮರ ದುರ್ಬಲ ವರ್ಗದಲ್ಲಿ ಸ್ವಾಭಿಮಾನದ ಕಲ್ಪನೆ ಸೃಷ್ಟಿಸಿ ಅವರ ಬದುಕಿಗೆ ಸ್ವಾವಲಂಬನೆಯ ನೆಲೆ ಒದಗಿಸಿದರು. ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಅನೇಕ ಮೂಲಭೂತ ಕಾರ್ಯಕ್ರಮಗಳನ್ನು ಕೈಗೊಂಡರು. ಶಿಷ್ಯವೇತನ, ಶುಲ್ಕ ರಿಯಾಯಿತಿ, ಉಚಿತ ಊಟ ವ್ಯವಸ್ಥೆ ಹೀಗೆ ಅವರು ಹಿಂದುಳಿದ ವರ್ಗದವರು ಸಾಂಸ್ಕøತಿಕವಾಗಿಯೂ ಮೇಲೆ ಬರಲು ಅನುಕೂಲ ಕಲ್ಪಿಸಿದರು. ಈ ವರ್ಗದ ಜನರು ಹೊಸ ಬದುಕು ಪಡೆದು ಹೊಸ ಚೈತನ್ಯದಿಂದ ಬದುಕಲು ಅರಸು ರೂವಾರಿಯಾದರು.

ಸತ್ವಶಾಲಿ ವ್ಯಕ್ತಿ :

ನಮ್ಮ ನಾಡಿನ ಇತಿಹಾಸದುದ್ದಕ್ಕೂ ಆಗಾಗ್ಗೆ ಸತ್ವಶಾಲಿ ವ್ಯಕ್ತಿಗಳ ಉಗಮವಾಗಿದೆ. ಸಂಪ್ರದಾಯದ ಬಿಗಿಮುಷ್ಟಿಯಲ್ಲಿ ಜಡ್ಡುಗಟ್ಟಿ ಜನ ವಿರೋಧಿಯಾಗಿ ರೂಪಗೊಂಡ ಸಮಾಜಕ್ಕೆ ಚಿಕಿತ್ಸೆ ನೀಡಿ, ಪರಿವರ್ತನೆಯ ಹಾದಿಯಲ್ಲಿ ಮುನ್ನಡೆಸಿದರು. ಇವರು ದೀನದಲಿತರ ಒಡಲಲ್ಲಿ ಭರವಸೆಯ ವಿಶಿಷ್ಟ ಬಯಕೆಯನ್ನು ಸೃಷ್ಟಿಸುತ್ತಾರೆ. ಸಮಾಜದ ವಿಮೋಜನೆಗೆ ಹೋರಾಡುತ್ತಾರೆ. ಇಂತಹ ಚಿಂತನಶೀಲ ಮಾನವತಾ ವಾದಿಗಳ ಸಾಲಿನಲ್ಲಿ ಗೌತಮ ಬುದ್ಧ, ಮಹಾತ್ಮಾ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಮುಂತಾದವರು ಬರುತ್ತಾರೆ. ಕನ್ನಡ ನಾಡಿನ ಜನಸಮೂಹದಲ್ಲಿ ನಿರ್ಲಕ್ಷ್ಯಕ್ಕೊಳಗಾದ ಬಹುಸಂಖ್ಯಾತ ದುರ್ಬಲ ವರ್ಗಗಳ ಚೇತನವನ್ನು ಬುದ್ಧಿಪೂರ್ವಕವಾಗಿ ಹುಡಿಕಿ ತಗೆದು, ಅವರ ಬರಡು ಬದುಕಿಗೆ ಆಸರೆಯ ನೀರುಣಿಸಿದವರಾಗಿದ್ದಾರೆ ದಿವಂಗತ ದೇವರಾಜ ಅರಸು ಅವರು. ಈ ಮಹಾನ್ ಚೇತನಗಳ ಸಾಲಿನಲ್ಲಿ ಸೇರಿ ಹೋಗಿರುವುದು ಈ ನಾಡಿನ ಪುಣ್ಯ, ವಿಶೇಷ; ಕನ್ನಡ ಜನರು ಹೆಮ್ಮೆ ಪಡುವ ವಿಷಯ.

ಎಲ್ಲರಿಗೂ ಡಿ.ದೇವರಾಜ ಅರಸು 102 ನೇ ಜಯಂತಿಯ ಶುಭಾಶಯಗಳು.

71ನೇ ಸ್ವಾತಂತ್ರ್ಯ ದಿನಾಚರಣೆ.

ಭಾರತದ ಸ್ವಾತಂತ್ರ್ಯ ದಿನಾಚರಣೆ:

ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಬ್ರಿಟೀಷರಿಂದ ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ದೇಶದಾದ್ಯಂತ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ. ದೇಶದ ಹಲವೆಡೆ ತ್ರಿವರ್ಣ ಧ್ವಜವನ್ನು ಹಾರಿಸಿ ಸಿಹಿ ಹಂಚಲಾಗುತ್ತದೆ. ಈ ಆಚರಣೆಯ ಪ್ರಮುಖ ಸಮಾರಂಭ ದೆಹಲಿಯ ಕೆಂಪು-ಕೋಟೆಯಲ್ಲಿ ನಡೆಯತ್ತದೆ. ಈ ಸಮಾರಂಭದಲ್ಲಿ, ಭಾರತದ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಧ್ವಜವನ್ನು ಹಾರಿಸಿ,ಭಾರತದ ಭಾರತದ ರಾಷ್ಟ್ರಗೀತೆ “ಜನ ಗಣ ಮನ”ವನ್ನು ಹಾಡಿ ನಂತರ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುತ್ತರೆ. ಈ ಭಾಷಣದಲ್ಲಿ, ದೇಶದ ಸಾಧನೆ,ದೇಶದ ಮುಂದಿರುವ ಪ್ರಮುಖ ಸವಾಲುಗಳ ಬಗ್ಗೆ ಮಾತನಾಡಿ, ಕೆಲವು ಪ್ರಗತಿ ಯೋಜನೆಗಳನ್ನು ಪ್ರಕಟಿಸಲಾಗುತ್ತದೆ. ಈ ದಿನದಂದು ದೇಶದ ಸ್ವಾತ್ರಂತ್ರ್ಯಕ್ಕೆ ಮಣಿದ ನಾಯಕರನ್ನು ಸ್ಮರಿಸಲಾಗುತ್ತದೆ.
ಸ್ವಾತ್ರಂತ್ರ್ಯದ ಹಾದಿ
ಜೂನ್ ೩,೧೯೪೭ ರಂದು ಅಂದಿನ ಗವರ್ನರ್ ಜನರಲ್ ಅಗಿದ್ದ ಲಾರ್ಡ್ ಮೌಂಟ್‌ಬ್ಯಾಟನ್, ಬ್ರಿಟಿಶ್ ಭಾರತ ಸಾಮ್ರಾಜ್ಯವನ್ನು ಭಾರತ ಮತ್ತು ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳಾಗಿ ವಿಭಜಿಸುವುದಾಗಿ ಘೋಷಿಸಿದನು. ಇದರ ನಂತರ ಭಾರತದ ಸ್ವಾತ್ರಂತ್ರ್ಯ ಕಾಯಿದೆ ೧೯೪೭ರನ್ವಯ ಆಗಸ್ಟ್ ೧೫, ೧೯೪೭ ರಂದು ಭಾರತವನ್ನು ಸ್ವತಂತ್ರ ರಾಷ್ಟ್ರವನ್ನಾಗಿ ಘೋಷಿಸಲಾಯಿತು. ಅಂದಿನ ಮದ್ಯರಾತ್ರಿ, ಜವಾಹರ್ ‌ಲಾಲ್ ನೆಹರು ರವರು ದೇಶದ ಪ್ರಥಮ ಪ್ರಧಾನ ಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಂದು ಅವರು ರಾಷ್ತ್ರವನ್ನುದ್ದೇಶಿಸಿ,ಟ್ರಿಸ್ಟ್ ವಿಥ್ ಡೆಸ್ಟಿನಿ ಭಾಷಣ ( ‘ಭಾಗ್ಯದೊದನೆ ಒಪ್ಪಂದ’ ಭಾಷಣ) ಮಾಡಿದರು.
ಮಧ್ಯರಾತ್ರಿಯ ಗಂಟೆ ಹೊಡೆಯುತ್ತಿದ್ದಂತೆ ಜಗತ್ತು ಮಲಗಿರುವಾಗ ಭಾರತವು ಚಲನಶೀಲತೆ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಳ್ಳುತ್ತದೆ. ಇತಿಹಾಸದಲ್ಲಿ ಅಪರೂಪವಾಗಿ ಬರುವ ಇಂಥ ಈ ಗಳಿಗೆಯಲ್ಲಿ ಹಳತಿನಿಂದ ಹೊಸತಿಗೆ ಕಾಲಿಡುತ್ತಿದ್ದೇವೆ . ಹಳೆಯ ಯುಗ ಮುಗಿದು ಬಹುಕಾಲ ಅದುಮಿಟ್ಟ ದೇಶವೊಂದರ ಚೇತನವು ತನ್ನ ಅಭಿವ್ಯಕ್ತಿಯನ್ನು ಕಂಡುಕೊಳ್ಳುತ್ತಿದೆ….. ಇವತ್ತು ನಾವು ನಮ್ಮ ದುರಾದೃಷ್ಟದ ಕಾಲವನ್ನು ಮುಗಿಸುತ್ತಿದ್ದೇವೆ, ಮತ್ತು ಭಾರತವು ತನ್ನನ್ನು ತಾನು ಮತ್ತೆ ಕಂಡುಕೊಳ್ಳುತ್ತಿದೆ .
ಪ್ರಧಾನಮಂತ್ರಿ ನೆಹರು ಮತ್ತು ಉಪಪ್ರಧಾನಮಂತ್ರಿ ಸರ್ದಾರ್ ವಲ್ಲಭಭಾಯ್ ಪಟೇಲ್ ರು ಲಾರ್ಡ್ ಮೌಂಟ್ ಬ್ಯಾಟನ್ನರನ್ನು ಭಾರತದ ಗವರ್ನರ್ ಜನರಲ್ ಆಗಿ ಮುಂದುವರೆಯಲು ಕೋರಿದರು. ಜೂನ್ ೧೯೪೮ ರಲ್ಲಿ ಅವರ ಸ್ಥಾನಕ್ಕೆ ಚಕ್ರವರ್ತಿ ರಾಜಗೋಪಾಲಾಚಾರಿ ಅವರು ಬಂದರು. ಪಟೇಲರು ೫೬೫ ರಾಜಸಂಸ್ಥಾನಗಳ ಭಾರತದ ರಾಜಕೀಯ ಏಕೀಕರಣ ದ ಜವಾಬ್ದಾರಿಯನ್ನು ವಹಿಸಿಕೊಂಡರು, ಜುನಾಗಢ, ಜಮ್ಮು ಮತ್ತು ಕಾಶ್ಮೀರ, ಮತ್ತು ಹೈದರಾಬಾದ್ ಸಂಸ್ಥಾನ ಗಳನ್ನು ಭಾರತಕ್ಕೆ ಸೇರ್ಪಡೆ ಮಾಡುವಲ್ಲಿ ಸೈನಿಕ ಬಲವನ್ನೂ ಉಪಯೋಗಿಸಿ “ರೇಷ್ಮೆ ಕೈಗವಸಿನಲ್ಲಿ ಉಕ್ಕಿನ ಮುಷ್ಠಿ” ತಂತ್ರವನ್ನು ಉಪಯೋಗಿಸಿದರು.
ಸಂವಿಧಾನ ರಚನಾಸಭೆಯು ಸಂವಿಧಾನದ ಕರಡನ್ನು 26 ನವೆಂಬರ್ 1949; ರಂದು ಸಿದ್ಧಗೊಳಿಸುವ ಕಾರ್ಯವನ್ನು ಸಂಪೂರ್ಣಗೊಳಿಸಿತು . 26 ಜನವರಿ 1950 ರಂದು ಭಾರತೀಯ ಗಣರಾಜ್ಯ ವನ್ನು ಅಧಿಕೃತವಾಗಿ ಘೋಷಿಸಲಾಯಿತು. ಸಂವಿಧಾನ ರಚನಾಸಭೆಯು ಡಾ. ರಾಜೇಂದ್ರಪ್ರಸಾದರನ್ನು ದೇಶದ ಪ್ರಥಮ ರಾಷ್ಟ್ರಪತಿ ಯನ್ನಾಗಿ ಚುನಾಯಿಸಿತು . ಅವರು ಗವರ್ನರ್ ಜನರಲ್ ರಾಜಗೋಪಾಲಾಚಾರಿಯವರಿಂದ ಅಧಿಕಾರವನ್ನು ಸ್ವೀಕರಿಸಿದರು. ನಂತರ ಸ್ವತಂತ್ರ ಸಾರ್ವಭೌಮ ಭಾರತವು ಇನ್ನೆರಡು ಪ್ರದೇಶಗಳನ್ನು ತನ್ನಲ್ಲಿ ಸೇರಿಸಿಕೊಂಡಿತು . ಅವು 1961ರಲ್ಲಿ ಪೋರ್ತುಗೀಸ್ ನಿಯಂತ್ರಣದಿಂದ ವಿಮೋಚನೆಗೊಳಿಸಿದ ಗೋವಾ ಮತ್ತು ಫ್ರೆಂಚರು ೧೯೫೪ರಲ್ಲಿ ಒಪ್ಪಿಸಿದ ಪಾಂಡಿಚೇರಿ . ೧೯೫೨ ರಲ್ಲಿ ಭಾರತವು ತನ್ನ ಮೊದಲ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಿತು . ಶೇ. ೬೨ ಕ್ಕೂ ಹೆಚ್ಚು ಮತದಾರರು ಅದರಲ್ಲಿ ಭಾಗವಹಿಸಿದರು. ಅದರಿಂದಾಗಿ ಭಾರತವು ವಾಸ್ತವದಲ್ಲಿ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವವಾಯಿತು .

ಎಲ್ಲರಿಗೂ ೭೧ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.
The Independence Day of India is celebrated on 15 August to commemorate its independence from British rule and its birth as a sovereign nation on 15 August 1947. India achieved independence following a largely peaceful civil disobedience movement led by the Indian National Congress and other political parties. The independence coincided with partition of India wherein the British Indian Empire was divided along religious line into two new nation—Dominion of India (later Republic of India) and Dominion of Pakistan; the partition was stricken with violent communal riot.
The Independence day is a national holiday in India. All over the country, flag-hoisting ceremonies are conducted by institutions as well as private meetings. The flagship event takes place in Delhi, the capital city of India, where the Prime Minister hoists the national flag at the Red Fort and delivers a nationally televised speech from its ramparts.
History
The present-day India was a part of the British Indian Empire. Although the British East India Company started trading in India in the seventeenth century, Company rule in India started effectively from 1757 after the Company’s victory in the Battle of Plassey. In 1858, following the Indian Rebellion of 1857, the Government of India Act 1858 led to the British Crown assuming direct control of India in the new British Raj. The struggle for independence from the British rule started in the nineteenth century, but became organized and forceful from 1910s, spearheaded by the Indian National Congress. The freedom struggle was characterized by largely peaceful non-violent civil disobedience led by Mahatma Gandhi; however, partition of India associated with the independence led to communal strife and violent riot in many parts of the subcontinent.

Wish you and all 71st HAPPY INDEPENDENCE DAY.